ಲಕ್ನೋ
ದೇಶದ ದಲಿತರ ಹಿತ ಕಾಯಲು ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಾಗಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಘೋಷಿಸಿದ್ದಾರೆ. ಉತ್ತರಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಹೊಸ ಪಕ್ಷ ಸ್ಥಾಪನೆ ಕುರಿತಂತೆ ಇದೇ ತಿಂಗಳಲ್ಲಿ ಅಧಿಕೃತವಾಗಿ ಘೋಷಣೆಯಾಗಲಿದ್ದು, ಹಾಲಿ ಸಂಘಟನೆಯನ್ನು ರಾಜಕೀಯವಾಗಿ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.“ಡಿಸೆಂಬರ್ ತಿಂಗಳಿನಲ್ಲೇ ಹೊಸ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಘೋಷಣೆ ಮಾಡಲು ಮುಂದಾಗಿದ್ದೆ, ಆದರೆ, ಅಸಾಂವಿಧಾನಿಕ ಕಾನೂನು ಜಾರಿಗೊಂಡಿದ್ದ ಸಿಎಎ ವಿರುದ್ಧ ಹೋರಾಟಕ್ಕಿಳಿಯಬೇಕಾಯಿತು” ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ