ನವದೆಹಲಿ:
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಈರುಳ್ಳಿ ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುವ ಮೂಲಕ ತಮಗೆ ನೀಡಲಾದ ಜಾಮೀನಿನ ಷರತ್ತಗಳನ್ನು ಉಲ್ಲಂಘಿಸಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣಾ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.
ಈ ವಿಷಯದ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಜೈಲಿನಿಂದ ಬಿಡುಗಡೆಗೊಂಡ ಮೊದಲ ದಿನವೇ ಇಂತಹ ಹೇಳಿಕೆ ನೀಡುವ ಮೂಲಕ ಚಿದಂಬರಂ ಅವರು ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತನ್ನು ಉಲ್ಲಂಘಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಜಿಡಿಪಿ ಶೇ.5ರಷ್ಟು ತಲುಪಿದರೂ ನಾವು ಅದೃಷ್ಟವಂತರೇ. ದೇಶದ ಆರ್ಥಿಕತೆ ಸಂಕಷ್ಟದಲ್ಲಿದ್ದರೂ ಪ್ರಧಾನಮಂತ್ರಿಗಳು ಮಾತ್ರ ಮೌನವಾಗಿದ್ದಾರೆ. ದೇಶದ ಆರ್ಥಿಕೆ ಸಂಕಷ್ಟದಲ್ಲಿದ್ದರೂ ಈ ವಿಚಾರವನ್ನು ತನ್ನ ಒರಟು ಹಾಗೂ ದಬಾಯಿಸುವ ಸಚಿವರ ಹೆಗಲಿಗೆ ವಹಿಸಿದ್ದಾರೆ. ದೇಶದ ಆರ್ಥಿಕತೆ ಸರಿಪಡಿಸುವಲ್ಲಿ ಕೇಂದ್ರ ಸರ್ಕಾರ ಅಸಾಮರ್ಥ್ಯವಾಗಿದೆ ಎಂದು ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ