ನವದೆಹಲಿ
ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ಹಿರಿಯ ನಾಯಕ ಪಿ.ಚಿದಂಬರಮ್ ಅವರಿಗೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.ಯುಪಿಎ ಅಧಿಕಾರಾವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವಧಿಯಲ್ಲಿ ನಡೆದಿರುವ ಅವ್ಯವಹಾರ ಕುರಿತಂತೆ ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿದೆ. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡು ಇದೇ 23 ರಂದು ವಿಚಾರಣೆ ಮುಂದೂಡಿ, ಚಿದಂಬರಂ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಏರ್ ಇಂಡಿಯಾ ಸಂಸ್ಥೆಯ ಬಹುಕೋಟಿ ಹಗರಣ ಹಾಗೂ ಅವ್ಯವಹಾರ ಕುರಿತಂತೆ ಅಂತಾರಾಷ್ಟ್ರೀಯ ವಿಮಾನಗಳ ಸ್ಥಳ ನಿಗದಿ ಕುರಿತಂತೆ ನಡೆದಿರುವ ಅಕ್ರಮದ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
. ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ