ನವದೆಹಲಿ:
ಸದ್ಯ ಆಡಳಿತ ಮತ್ತು ವಿರೋಧ ಪಕ್ಷದ ನಡುವಿನ ಶೀತಲ ಸಮರಕ್ಕೆ ಕಾರಣವಾಗಿರುವ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಮತ್ತು ಅವರನ್ನು ಇನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಿದ್ದ ಸಿಬಿಐ ಅಧಿಕಾರಿಗಳ ಮನವಿಯನ್ನು ಕೋರ್ಟ್ ಪುರಸ್ಕರಿಸಿ ಚಿದಂಬರಂ ಅವರ ಕಸ್ಟಡಿ ಯನ್ನು ಆಗಸ್ಟ್ 30ರವರೆಗೆ ಮುಂದುವರೆಸಿವುವಂತೆ ಆದೇಶ ನೀಡಿದೆ .
ಬುಧವಾರ ರಾತ್ರಿ ಚಿದಂಬರಂ ನಿವಾಸದಿಂದ ಅವರನ್ನು ಸಿಬಿಐ ಬಂಧಿಸಿ ಆಗಸ್ಟ್ 26 ರವರೆಗೆ ವಶಕ್ಕೆ ಪಡೆದಿತ್ತು. ಇಂದಿಗೆ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಐದು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲು ಮನವಿ ಸಲ್ಲಿಸಿತ್ತು.ಈ ಹಿಂದೆ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಸಹ ಅರ್ಜಿಯನ್ನು ತಳ್ಳಿಹಾಕಿತ್ತು.
ಪಿ.ಚಿದಂಬರಂ ಅವರನ್ನು ಇಂದು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸಿತ್ತು. ಮೂರು ಗಂಟೆಗಳ ಕಾಲ ನಡೆದ ವಿಚಾರಣೆಯ ನಂತರ,ನ್ಯಾಯಾಲಯವು ಆಗಸ್ಟ್ 30 ರವರೆಗೆ ಚಿದಂಬರಂ ಅವರನ್ನು ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ