ನವದೆಹಲಿ:
ಅಮೇರಿಕದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರು ಜಮ್ಮು-ಕಾಶ್ಮೀರ ವಿಭಜನೆ ಮತ್ತು 370ನೆ ವಿಧಿ ರದ್ದತಿ ಕುರಿತಾದ ವಿಷಯಗಳನ್ನು ಪ್ರಸ್ತಾಪಿಸುವುದರ ಮೂಲಕ ತನ್ನ ದೇಶದ ಚಿರಕಾಲದ ಮಿತ್ರ ರಾಷ್ಟ್ರ ಪಾಕಿಸ್ಥಾನದ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತಿರುವ ಚೀನಾ ಈ ಹಿಂದೆ ಪ್ರಧಾನಿ ನೆಹರು ಅವರು ವಿಶ್ವಸಂಸ್ಥೆಯ ಮಧ್ಯಸ್ಥಿಕೆಯಲ್ಲಿ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕುರಿತಾದ ಹಕ್ಕುಪತ್ರ, ಭದ್ರತಾ ಮಂಡಳಿ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳನ್ನು ಈಗಿನ ಸರ್ಕಾರ ಗಾಳಿಗೆ ತೂರಿ ಏಕಪಕ್ಷೀಯವಾಗಿ ನಿರ್ಣಯ ತೆಗೆದುಕೊಳ್ಳತ್ತಿದೆ ಇದರಿಂದಾಗಿ ಅಲ್ಲಿನ ಜನ ಗೊಂದಲಕ್ಕೀಡಾಗಿದ್ದಾರೆ ಎಂದು ತನ್ನ ತಕರಾರು ತೆಗೆದಿತ್ತು ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರವನ್ನೂ ನೀಡಿದೆ ಎನ್ನಲಾಗಿದೆ.
ಜಮ್ಮು-ಕಾಶ್ಮೀರ ಮತ್ತು ಲಡಾಕ್ ವಿಚಾರವು ಭಾರತದ ಆಂತರಿಕ ವಿಷಯವಾಗಿದ್ದು ಮತ್ತು ಅಲ್ಲಿ ಆಗುತ್ತಿರುವ ಬದಲಾವಣೆ ಸಂಪೂರ್ಣವಾಗಿ ಭಾರತಕ್ಕೆ ಮಾತ್ರ ಸಂಬಂಧಿಸಿದ ವಿಷಯ. ಅದು ಚೀನಾಕ್ಕೂ ಚೆನ್ನಾಗಿ ಅರಿವಿದೆ ಎಂದು ಟಾಂಗ್ ನೀಡಿದ್ದಾರೆ.
ಭಾರತ ದೇಶದ ಸಾರ್ವಭೌಮತ್ವ ಮತ್ತು ಪ್ರಾಂತೀಯ ಆಂತರಿಕತೆಯನ್ನು ಬೇರೆ ದೇಶಗಳು ಗೌರವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಕ್ರಮ ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಮೂಲಕ ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳಿಂದ ದೂರವಿರಿ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ