ನವದೆಹಲಿ
ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರತಿ ಕಛೇರಿಯನ್ನು ಆರ್ ಟಿ ಐ ವ್ಯಾಪ್ತಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದ ಆರ್ ಟಿ ಐ ಸಂಬಂಧ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ನ್ಯಾಯಾಧೀಶರು ಈ ನಿರ್ಧಾರ ಪ್ರಕಟಿಸಿದ್ದಾರೆ.
2010ರಲ್ಲಿಯೇ ಸುಪ್ರೀಂಕೋರ್ಟ್ ಸಾರ್ವಜನಿಕ ಉತ್ತರದಾಯಿತ್ವ ಹೊಂದಿದ್ದು, ಸಿಜೆಐ ಕಚೇರಿ ಕೂಡಾ ಆರ್ ಟಿಐ ಕಾಯ್ದೆಯಡಿ ಬರಬೇಕಾಗಿದೆ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಆದರೆ ಕೆಲವು ಷರತ್ತುಗಳೊಂದಿಗೆ ಸಿಜೆಐ ಕಚೇರಿ ಆರ್ ಟಿಐ ವ್ಯಾಪ್ತಿಗೆ ಒಳಪಡುತ್ತದೆ ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
