ನವದೆಹಲಿ:
ಜೆಎನ್ ಯು ನಲ್ಲಿ ನಡೆದಿರುವ ಹಿಂಸಾಚಾರದ ಕುರಿತಂತೆ ಪ್ರತಿಕ್ರಿಯೇ ನೀಡಿರುವ ಸುಬ್ರಮಣಿಯನ್ ಸ್ವಾಮಿ ಅವರು ಈ ಹಿಂಸಾಚಾರಗಳಿಗೆ ಕೊನೆ ಹಾಡಬೇಕಾದರೆ ಎರಡು ವರ್ಷಗಳ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕು ಎಂದು ಹೇಳಿದ್ದಾರೆ.
Cancer is very deep in
JNU & surgery is necessary
Dr @Swamy39 urges Govt
to #ShutDownJNU for 2yrs
& systematically clean it
(because #JNU gets more funds
& subsidy’s than any other university & produces most
disloyal students)@jagdishshetty @rvaidya2000pic.twitter.com/BbCmJfNUU4— vishal mehta?? (@vishalnautamlal) January 6, 2020
ದೇಶದ ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಖಾಸಗಿ ಸುದ್ದಿವಾಹಿನಿಯೊಂದಿಗೆ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿ, ವಿಪಕ್ಷಗಳ ವಿರುದ್ಧ ತೀವ್ರ ಕಿಡಿಕಾರಿದರು. ಜೆಎನ್ ಯು ಹಿಂಸಾಚಾರಕ್ಕೆ ವಿರೋಧ ಪಕ್ಷಗಳೇ ಕಾರಣ ಎಂದು ಹೇಳಿದ ಸ್ವಾಮಿ, ಜೆಎನ್ ಯು ವಿದ್ಯಾರ್ಥಿಗಳ ಹೋರಾಟವನ್ನು ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಹಿಸಾಕ್ತಿಗಾಗಿ ಹೈಜಾಕ್ ಮಾಡಲು ಯತ್ನಿಸಿದ ಪರಿಣಾಮವೇ ಇಂದು ಅಲ್ಲಿ ಹಿಂಸಾಚಾರ ನಡೆದಿದೆ. ವಿಪಕ್ಷಗಳಿಗೆ ಸರ್ಕಾರವನ್ನು ಟೀಕಿಸಲು ಒಂದಿಲ್ಲೊಂದು ಕಾರಣ ಬೇಕಿದೆ. ಯಾವುದೂ ಸಿಗದೇ ಇದ್ದಾಗ ತಾವೇ ಕಾರಣವನ್ನು ಸೃಷ್ಟಿಸಲು ಮುಂದಾಗಿವೆ ಎಂದು ಕಿಡಿಕಾರಿದ್ದಾರೆ.
