ನವದೆಹಲಿ
ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿಯೇ ದೆಹಲಿಯ ಕಾಂಗ್ರೆಸ್ ಮುಖಂಡ ಜನಾರ್ದನ್ ದ್ವಿವೇದಿ ಅವರ ಪುತ್ರ ಸಮೀರ್ ದ್ವಿವೇದಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಸಮೀರ್ ದ್ವಿವೇದಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಜನಾರ್ದನ್ ದ್ವಿವೇದಿ ದಶಕಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಗತಿ ಪರ ಅಭಿವೃದ್ಧಿ ಕಾರ್ಯಗಳನ್ನು ಕಂಡು ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ಸಮೀರ್ ಹೇಳಿದ್ದಾರೆ ಎನ್ನಲಾಗಿದೆ.
ವಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
