ನವದೆಹಲಿ :
ಕಾಂಗ್ರೆಸ್ ನ ಹಿರಿಯ ಮುಖಂಡ ಗುಲಾಬ್ ನಬೀ ಆಜಾದ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೂ ಕೊರೋನಾ ಸೋಂಕು ಪತ್ತೆ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಕ್ವಾರಂಟೈನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದಂತ ಯಾರಿಗಾದರೂ ಕೊರೋನಾ ಲಕ್ಷಣಗಳಿದ್ದರೇ, ಪರೀಕ್ಷೆಗೆ ಒಳಪಟ್ಟು, ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ