ಹೊಸದಿಲ್ಲಿ :
ಕೆಲ ವಾರಗಳ ಹಿಂದೆ ಅಲ್ವಾರ್‌ನ ದಲಿತ ಮಹಿಳೆಯ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಆಗಿರುವ ಪ್ರಕರಣವನ್ನು ಮುಚ್ಚಿ ಹಾಕಲು ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಯತ್ನಿಸಿತ್ತು ಎಂದು ಮಾಯಾವತಿ ಗಂಭೀರ ಆರೋಪ ಮಾಡಿದ್ದಾರೆ.
ಚುನಾವಣೆ ಮುಗಿಯುವ ವರೆಗೆ ಪ್ರಕರಣವನ್ನು ಬಯಲು ಮಾಡದೇ ಮುಚ್ಚಿ ಹಾಕಲು ಸರ್ಕಾರ ಮುಂದಾಗಿತ್ತು. ಸಂತ್ರಸ್ತೆಯ ಕುಟುಂಬದವರಿಗೂ ಬೆದರಿಕೆ ಹಾಕಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತೆಗೆ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ನ್ಯಾಯ ಸಿಗುವ ಭರವಸೆ ನನಗಿಲ್ಲ. ಸುಪ್ರೀಂ ಕೋರ್ಟ್ ಮದ್ಯ ಪ್ರವೇಶ ಮಾಡಿ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಚುನಾವಣಾ ಆಯೋಗದ ವಿರುದ್ಧವೂ ಆಕ್ರೋಶ
ಮಹಿಳೆಯರ ವಿರುದ್ಧ ಅವಹೇಳನಕಾರಿ, ವಿವೇಕವಿಲ್ಲದೆ ನಿಂದನೆಯ ಭಾಷೆ ಬಳಸುತ್ತಿರುವ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಸುಪ್ರೀಂ ಕೋರ್ಟ್ ಸ್ವಯಂ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮಕೈಗೊಂಡು ಭವಿಷ್ಯದಲ್ಲಿ ಅಂತಹ ಹೇಳಿಕೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಎಪ್ರಿಲ್ 26 ರಂದು ಪತಿಯನ್ನು ಥಳಿಸಿ ಐವರು ಕಾಮಾಂಧರು ಮಹಿಳೆಯ ಮೇಲೆ ಬರ್ಬರವಾಗಿ ಗ್ಯಾಂಗ್ ರೇಪ್ ಎಸಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
