ನವದೆಹಲಿ:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದೆ
ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.ಅಂಬೇಡ್ಕರ್ ನಗರದಲ್ಲಿ ಆಸ್ಪತ್ರೆಯೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ವೇಳೆ ಪರಿಸ್ಥಿತಿ ಹದಗೆಟ್ಟರೆ, ಅದನ್ನು ನಿರ್ವಹಿಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಿದೆ ಎಂದರು.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಎಲ್ಲವೂ ಉತ್ತಮ ರೀತಿಯಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದೆ. ಮರಣ ಪ್ರಮಾಣ
ಕಡಿಮೆಯಾಗಿದೆ ಎಂದು ಕೇಜ್ರಿವಾಲ್ ತಿಳಿಸಿದರು.ನಗರದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ. ನಾವು ಕ್ರಮೇಣ ಕೋವಿಡ್-19 ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆ ಎಂದು ಅವರು ಹೇಳಿದರು. ಜುಲೈ 25 ರಂದು ಬುರಾರಿಯಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನು ಕೇಜ್ರಿವಾಲ್ ಉದ್ಘಾಟಿಸಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ