ಅಂಫಾನ್ ಚಂಡಮಾರುತ ಒಡಿಶಾ ಹಾಗೂ ಪಶ್ಚಿಮ ಬಂಗಾಳ ಕಡಲ ತೀರದಲ್ಲಿ ತನ್ನ ಪ್ರಭಾವ ಭೀರಲು ಶೂರು ಮಾಡಿದ್ದು , ಇದರ ಪರಿಣಾಮವಾಗಿ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ ಎಂಧು ತಿಳಿದು ಬಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ಭಾರತೀಯ ಹವಾಮಾನ ಇಲಾಖೆ, ಬಂಗಾಳ ಕೊಲ್ಲಿಯಲ್ಲಿ ಉದ್ಭವಗೊಂಡಿರುವ ಅಂಫಾನ್ ಚಂಡಮಾರುತದ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.
ನಿರೀಕ್ಷೆಯಂತೆ ಅತ್ಯಂತ ಶಕ್ತಿಶಾಲಿ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಗೊಂಡಿರುವ ಅಂಫಾನ್ ಚಂಡಮಾರುತ ಒಡಿಶಾ ಹಾಗೂ ಪಶ್ಚಿಮ ಬಂಗಾಳದತ್ತ ಮುಖಮಾಡಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಮೆರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಇದರಂದಾಗಿ ಪಶ್ಚಿಮ ಬಂಗಾಳ ಹಾಗೂ ಒಡಿಶಾ ತೀರ ಪ್ರದೇಶದಿಂದ ಸುರಿ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.
ಬಂಗಾಳದಲ್ಲಿ ಮಾತ್ರವಾಗಿ ಮೂರು ಲಕ್ಷದಷ್ಟು ಜನರನ್ನು ಸ್ಥಳಾಂತರ ಮಾಡಲಾಗಿದೆ. ಬುಧವಾರ ಸಂಜೆಯ ವೇಳೆಗೆ ಅಂಫಾನ್ ಚಂಡಮಾರುತ ಮತ್ತಷ್ಟು ಶಕ್ತಿಯನ್ನು ಪಡೆಯಲಿದೆ ಎಂದು ಉಲ್ಲೇಖಿಸಲಾಗಿದೆ. ಭಾರಿ ಮಳೆಯಿಂದಾಗಿ ತಗ್ಗಾದ ಪ್ರದೇಶಗಳು ಜಲಾವೃತಗೊಳ್ಳಲಿದ್ದು, ವಿದ್ಯುತ್ ಸೇರಿದಂತೆ ಸಂಪರ್ಕ ಕಡಿತಗೊಳ್ಳಲಿದೆ. ಇನ್ನು ಹಲವೆಡೆ ಮಣ್ಣು ಕುಸಿತ ಹಾಗೂ ಗುಡಿಸಲುಗಳು ಗಾಳಿಗೆ ಹಾರಿ ಹೋಗಲಿದೆ ಎಂದು ಎಚ್ಚರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ