ನವದೆಹಲಿ
ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ವಿರುದ್ಧ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ದೆಹಲಿಯ ಇಬ್ಬರು ಮಹಿಳೆಯರು ಮಾನಹಾನಿ ಪ್ರಕರಣ ಹೂಡಿದ್ದಾರೆ.
ಅಮಿತ್ ಮಾಳವೀಯಾ ಅವರು ”ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದಕ್ಷಿಣ ದೆಹಲಿಯ ಶಾಹಿನ್‌ಬಾಗ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಹಣ ಪಡೆದು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಆರೋಪಿಸಿ ತಿರುಚಿದ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು” ಎಂದು ದೂರುದಾರರು ಆರೋಪಿಸಿದ್ದಾರೆ.