ನವದೆಹಲಿ:

ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಧರ್ಮಪತ್ನಿಯಾದ ಸುನೀತಾ ಕೇಜ್ರಿವಾಲ್ ಅವರ ಬಳಿಯಲ್ಲಿ ಸದ್ಯ ಎರಡು ವೋಟರ್ ಐಡಿ ಇರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಕೋರ್ಟ್ ಬುಧವಾರ ಉತ್ತರ ಪ್ರದೇಶ ಮತ್ತು ದೆಹಲಿ ಚುನಾವಣಾ ಆಯೋಗಕ್ಕೆ ಸಮನ್ಸ್ ಜಾರಿ ಮಾಡಿದೆ.
ಸುನೀತಾ ಅವರು ಎರಡು ವೋಟರ್ ಐಡಿ ಹೊಂದಿದ್ದಾರೆ ಆರೋಪಿಸಿ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಅವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಶೈಫಲಿ ಬರ್ನಾಲ ಟಂಡನ್ ಅವರು, ಸುನೀತಾ ಕೇಜ್ರಿವಾಲ್ ಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಉತ್ತರ ಪ್ರದೇಶ ಮತ್ತು ದೆಹಲಿ ಚುನಾವಣಾ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ.ದೂರಿನಲ್ಲಿ ಸುನೀತಾ ಅವರು ಗಾಜಿಯಾಬಾದ್ ಲೋಕಸಭಾ ಕ್ಷೇತ್ರದ ಸಾಹಿಬಾದ್ ಹಾಗೂ ಚಾಂದನಿ ಚೌಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಗುರುತು ಪತ್ರ ಹೊಂದಿದ್ದಾರೆ ಎಂದು ಖುರಾನಾ ಅವರು ಆರೋಪಿಸಿ ದೂರು ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
