ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ ದೀದಿ..!!

ನವದೆಹಲಿ:
    ಕೇಂದ್ರ ಸರ್ಕಾರದ ವಿರುದ್ಧ ಯಾವಾಗಲು ಟೀಕೆಗಳ ಸುರಿಮಳೆ ಸುರಿಸುವ ದೀದಿ ಈ ಬಾರಿ ಮೋದಿ ಸರ್ಕಾರಕ್ಕೆ ಮೊದಲ ಬಾರಿಗೆ ಮಹತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಬಲ ನೀಡಿ ಅಚ್ಚರಿಗೆ ಕಾರಣವಾಗಿದೆ.
      ಸಂಸತ್ ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಟಿಎಂಸಿ ಪಕ್ಷ ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿದೆ. ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆರು ತಿಂಗಳ ಕಾಲ ವಿಸ್ತರಿಸುವ ಪ್ರಸ್ತಾಪವನ್ನು ಗೃಹ ಸಚಿವ ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಂಡಿಸಿದರು. ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆಯ ಪ್ರಸ್ತಾಪ ಮಂಡನೆಗೆ ಸಂಬಂಧಪಟ್ಟ ಹೇಳಿಕೆಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಬೆಂಬಲ ಸೂಚಿಸುವ ಮೂಲಕ ಅಚ್ಚರಿಗೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
     

Recent Articles

spot_img

Related Stories

Share via
Copy link