ನವದೆಹಲಿ:
ದಾಖಲೆ ಇಲ್ಲದ 8.59 ಕೋಟಿ ರೂ.ಅಕ್ರಮ ಹಣದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಇಂದು ಸಂಜೆ ಈ ಪ್ರಕರಣದ ಸಂಬಂಧ ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಬಂಧಿಸಿದೆ. ಇವತ್ತು ಮಧ್ಯಾಹ್ನ 12 ಗಂಟೆಗೆ ಕಡತ ತುಂಬಿದ ಬ್ಯಾಗ್ಗಳೊಂದಿಗೆ ಅಧಿಕಾರಿಗಳೆದುರು ಹಾಜರಾದ ಅವರನ್ನು ನಿನ್ನೆ ಮೊನ್ನೆ ರೀತಿಯಲ್ಲಿ ಮಧ್ಯಾಹ್ನ ಊಟಕ್ಕೆ ಡಿಕೆಶಿಯನ್ನು ಹೊರಗೆ ಬಿಡಲಿಲ್ಲ.
ನಿರೀಕ್ಷಣಾ ಜಾಮೀನು ಸಲ್ಲಿಸುವ ನಿರ್ಧಾರದಿಂದ ಸದ್ಯಕ್ಕೆ ಡಿಕೆ ಶಿವಕುಮಾರ್ ಹಿಂದೆ ಸರಿದಿದ್ದಾರೆ. ಡಿಕೆಶಿ ಹೊರತುಪಡಿಸಿ ಉಳಿದವರು, ಸಮನ್ಸ್ ರದ್ದು ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದ್ರೆ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ವಿಚಾರಣೆ ನಡೆಯುತ್ತಾ ಇರೋವಾಗ ತುರ್ತು ವಿಚಾರಣೆ ಅಗತ್ಯ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ