ಕೊರೋನಾ ಸೋಂಕಿನ ಬಗ್ಗೆ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ : ಕೇಂದ್ರ ಸರ್ಕಾರ

ನವದೆಹಲಿ

     ಮಾರಣಾಂತಿಕ ಕೊರೊನಾ ವೈರಸ್ ನೊಣಗಳಿಂದ ಹರಡುವುದಿಲ್ಲ ಈ ಸಂಬಂಧ ಹರಡುತ್ತಿರುವ ವದಂತಿಗಳಲ್ಲಿ ಯಾವುದೇ ರೀತಿಯ ಸತ್ಯಾಂಶಗಳಿಲ್ಲದಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡಬೇಕಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

     ಕೊರೊನಾ ವೈರಸ್ ನೊಣಗಳಿಂದ ಹರಡುತ್ತದೆ ಎಂದು ಎಲ್ಲೆಡೆ ಹರಿದಾಡುತ್ತಿರುವ ಆತಂಕವನ್ನು ಕೇಂದ್ರ ಆರೋಗ್ಯ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಲಾವ್ ಅಗರ್ವಾಲ್ ತಳ್ಳಿಹಾಕಿದ್ದು ನೊಣ ಅಥವಾ ಸೊಳ್ಳೆಗಳಿಂದ ಕೊರೊನಾ ಹರಡುವುದಿಲ್ಲ ಎಂದು ತಿಳಿಸಿದ್ದಾರೆ.

    ಕೋವಿಡ್ 19 ಸಾಂಕ್ರಾಮಿಕ ಸೋಂಕು ಪ್ರಕರಣಗಳು ದೇಶದಲ್ಲಿ ಹೆಚ್ಚಳವಾಗುತ್ತಿದೆ. ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇದಕ್ಕಾಗಿ ಸಾಮಾಜಿಕ ಅಂತರವನ್ನು ಹೆಚ್ಚು ಕಾಯ್ದುಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಹೊಸ ಕೋವಿಡ್ ವೈರಸ್ ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಆಗಿದೆ. ಕೋವಿಡ್ 19 ಸೋಂಕಿತ ವ್ಯಕ್ತಿ ಕೆಮ್ಮುವುದು ಅಥವಾ ಸೀನುವುದರಿಂದ ಆರೋಗ್ಯವಂತ ವ್ಯಕ್ತಿಯ ಮೂಗಿನ ಮೂಲಕ ದೇಹದೊಳಕ್ಕೆ ಪ್ರವೇಶಿಸುತ್ತದೆ.

ಹರಡುವುದು ಹೇಗೆ?

     ಮಾರಣಾಂತಿಕ ಕೋವಿಡ್ 19 ವೈರಸ್ ಮುಖ್ಯವಾಗಿ ವ್ಯಕ್ತಿಯಿಂದ ವ್ಯಕ್ತಿಗೆ, ಒಬ್ಬ ವ್ಯಕ್ತಿ ಹಾಗೂ ಮತ್ತೊಬ್ಬ ವ್ಯಕ್ತಿಯ ನಿಕಟ ಸಂಪರ್ಕದಿಂದ ಸೋಂಕು ಹರಡುತ್ತದೆ ವೈರಸ್ ವ್ಯಕ್ತಿಯ ಬಾಯಿ, ಮೂಗು ಅಥವಾ ಕೈಗೆ ತಗುಲಿದರೆ ಅದು ಶ್ವಾಸಕೋಶವನ್ನು ಸೇರಿಕೊಳ್ಳುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link