ಹೊಸದಿಲ್ಲಿ
ಇತ್ತೀಚೆಗೆ ವೈದ್ಯರ ಮೇಲೆ ನಡೆದಿದ್ದ ಹಲ್ಲೆಯನ್ನು ಖಂಡಿಸಿ ದೇಶದ ರಾಜಧಾನಿ ದೆಹಲಿಯಲ್ಲಿ ವೈದ್ಯರು ಇಂದು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಿದ್ದಾರೆ.ಚಿಕಿತ್ಸೆಗೆಂದು ಆಗಮಿಸಿದ ರೋಗಿಗಳು ಮತ್ತು ಸಂಬಂಧಿಗಳು ಸೂಕ್ತ ಚಿಕಿತ್ಸೆ ಸಿಗದೆ ಪರದಾಡುವತಹ ಪರಿಸ್ಥತಿ ಬಂದಿದೆ.
ತುರ್ತು ಚಿಕಿತ್ಸೆಗಳಿಗಾಗಿ ಆಗಮಿಸಿದ ರೋಗಿಗಳನ್ನು ಬೇರೆ ಅಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದ್ದು.ಪಶ್ಚಿಮ ಬಂಗಾಳದಲ್ಲಿ ಕಳೆದ ನಾಲ್ಕು ದಿನಗಳಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ಸಿಎಂ ಮಮತಾ ಬ್ಯಾನರ್ಜಿಯವರು ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಗೂ ಬಗ್ಗದೆ ಪ್ರತಿಭಟನೆ ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ಕೋಲ್ಕತಾದ ಎನ್‌ಆರ್‌ಎಸ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವೈದ್ಯರ ಮೇಲೆ ನಡೆದ ಹಲ್ಲೆಯಲ್ಲಿ ಕೆಲವು ವೈದ್ಯರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಇದನ್ನು ಪ್ರತಿಭಟಿಸಿ ವೈದ್ಯರು ಮಂಗಳವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಎಸ್‌ಎಸ್‌ಕೆಎಂ ಆಸ್ಪತ್ರೆಯ ಆವರಣಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ 2 ಗಂಟೆಯೊಳಗೆ ಮುಷ್ಕರ ಸ್ಥಗಿತ ಗೊಳಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ಆದರೆ ವೈದ್ಯರು ಇದಕ್ಕೆ ಬೆದರದೇ, ಮುಷ್ಕರ ಮುಂದುವರಿಸಿದ್ದಾರೆ ಎನ್ನಲಾಗಿದೆ.