ನವದೆಹಲಿ:
ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕುರಿತಂತೆ ತೆಗೆದುಕೊಂಡ ಐತಿಹಾಸಿಕ ನಿರ್ಧಾರದಿಂದ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಉಂಟಾಗಿದೆ ಎಂಬ ಸುದ್ದಿಗಳ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಇತ್ತ ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ ಎಂದು ವರದಿಯಾಗಿದೆ .
ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಅಧ್ಯಯನ ನಡೆಸಲು ಬಂದಿರುವ ಯೂರೋಪ್ ಒಕ್ಕೂಟದ 27 ಮಂದಿ ಸಂಸದರ ತಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ನಿನ್ನೆ ಭೇಟಿ ಮಾಡಿ ಮಾತುಕತೆ ನಡೆಸಿದರು. ಜಮ್ಮು ಕಾಶ್ಮೀರದ ಈಗಿನ ಸ್ಥಿತಿಗತಿ ಹಾಗೂ ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಈ ಪ್ರದೇಶದ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ಅಜಿತ್ ದೋವಲ್ ಅವರು ನಿಯೋಗಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ