ಮಾಜಿ ಮುಖ್ಯಮಂತ್ರಿಗೆ ಬಿಡುಗಡೆ ಭಾಗ್ಯ..!

ಶ್ರೀನಗರ:

    ಕಲಂ 370 ರದ್ದತಿ ನಂತರ ಸಾರ್ವಜನಿಕ ಹಿತದೃಷ್ಠಿಯಿಂದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿದ್ದ ಅವರನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಇಂದು ಬಿಡುಗಡೆ ಮಾಡಿದೆ. ಬಂಧನ ಹಿಂಪಡೆಯುವ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರಾಡಳಿತ ಪ್ರದೇಶದ ಯೋಜನಾ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯ್ದೆ 1978ರ ಸೆಕ್ಷನ್ 19(1)ರಡಿ ಲಭ್ಯವಾಗಿರುವ ಅಧಿಕಾರ ಬಳಸಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನ ಆದೇಶವನನ್ನು ರದ್ದುಪಡಿಸಿದೆ. ಈ ಸಂಬಂಧ ಶ್ರೀನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

     ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಸುಮಾರು ಏಳು ತಿಂಗಳುಗಳಿಂದ ಪಾರೂಕ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು, ಸರ್ಕಾರದ ಮುಂದಿನ ಆದೇಶದಂತೆ ಅವರನ್ನು ಗೃಹ ಬಂಧನದಿಂದ ಬಿಡುಗಡೆಮಾಡಲಾಗುವುದು.

    ಕೇಂದ್ರ ಸರ್ಕಾರ ಕಳೆದ ವರ್ಷದ ಆಗಸ್ಟ್ 5 ರಂದು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನ ವಿಧಿ 370 ರದ್ದುಪಡಿಸಿ, ವ್ಯಾಪಕ ನಿರ್ಬಂಧಗಳನ್ನು ಜಾರಿಗೊಳಿಸಿದ ನಂತರ ಪುತ್ರ ಓಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕೀಯ ನಾಯಕರೊಂದಿಗೆ ೮೩ ವರ್ಷದ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap