ಮಾಜಿ ಶಾಸಕ ಕೊರೋನಾಗೆ ಬಲಿ

ಪುದುಚೆರಿ:

       ಮಾಜಿ ಶಾಸಕ ಮತ್ತು ಎನ್ ಆರ್ ಕಾಂಗ್ರೆಸ್ ಮುಖಂಡ ವಿ ಭಾಲನ್ ಕೊರೋನಾಗೆ ಬಲಿಯಾಗಿದ್ದಾರೆ.ಭಾಲನ್ ಮಂಗಳವಾರ ಸಾವನ್ನಪ್ಪಿದ್ದು ಪತ್ನಿ ಮತ್ತು ಪುತ್ರರನ್ನು ಅಗಲಿದ್ದಾರೆ. ಕಾಮರಾಜ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಾಲನ್ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ನಂತರ ಅವರನ್ನು ಶ್ರೀ ಮನಕುಲ ವಿನಯನಗರ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಕಳೆದ ಐದು ದಿನಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ನ್ಯೂಮೋನಿಯಾ ಮತ್ತು ಡಯಾಬಿಟಿಸ್ ಬಿಪಿ ಮತ್ತು ಕಿಡ್ನಿ ಸಂಬಂಧಿತ ಸಮಸ್ಯೆಯಿಂದಾಗಿ ಬಳಲುತ್ತಿದ್ದರು. ಸರ್ಕಾರದ ಶಿಷ್ಟಾಚಾರದಂತೆ ಅಂತಿಮ ಸಂಸ್ಕಾರ ನಡೆಯಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link