ಕಾಂಗ್ರೆಸ್ ತೊರೆದ ಮಾಜಿ ಸಂಸದೆ..!

ನವದೆಹಲಿ:

ಮಾರ್ಚ್‌ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದೆ ಸಾವಿತ್ರಿಬಾಯಿ ಫುಲೆ ಅವರು ಗುರುವಾರ ಕಾಂಗ್ರಸ್ ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನ ಧ್ವನಿ ಯಾರಿಗೂ ಕೇಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಮುನ್ನ ಬಿಜೆಪಿಯಿಂದ ಪುಲೆ ಕಳೆದ ಡಿಸೆಂಬರ್ ನಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಸ್ಮೃತಿದಿನದಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಆಗ ಆಡಳಿತ ಪಕ್ಷವು “ಸಮಾಜದಲ್ಲಿ ವಿಭಜನೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಕಾರಣ ನೀಡಿದ್ದರು.

ಸಾವಿತ್ರಿಬಾಯಿ ಅವರು ಬಿಎಸ್ಪಿ ಜತೆಗೆ ಸಹ ಗುರುತಿಸಿಕೊಂಡಿದ್ದರು 2000 ರಲ್ಲಿ ಬಿಜೆಪಿಗೆ ಸೇರಿದರು ಮತ್ತು 2002, 2007 ಮತ್ತು 2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು. 2014 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap