ರೈಲು ದುರಂತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಯೋಗಿ

0
18
ರಾಯ್ ಬರೇಲಿ: 
 
       ರಾಯ್ ಬರೇಲಿಯಲ್ಲಿ ರೈಲು ಹಳಿ ತಪ್ಪಿದ್ದರಿಂದ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ. 
       ಈ ಅವಗಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ರೂ.1 ಲಕ್ಷ, ಸಣ್ಣಪುಟ್ಟ ಗಾಯಗಳಾಗಿರುವವರಿಗೆ ರೂ.50 ಸಾವಿರ ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ತಿಳಿಸಿದ್ದಾರೆ.
ಜೊತೆಗೆ ಪರಿಹಾರ ಕಾರ್ಯ ಚುರುಕು ಮಾಡಲು ಕೇಂದ್ರ ಆದೇಶಿಸಿದೆ ಎಂದು ಅವರು ಹೇಳಿದ್ದಾರೆ.
 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here