ಪಾಟ್ನಾ 
ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸುವ ಭರಾಟೆ ಮುಂದುವರೆದಿದೆ. ಈ ನಡುವೆ ಅಕ್ಟೋಬರ್ 3ರಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದ್ದ ಅಧಿಸೂಚನೆಯನ್ನು ಮತ್ತೊಮ್ಮೆ ಮುಂದಿಟ್ಟಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಎಕ್ಸಿಟ್ ಪೋಲ್ ಪ್ರಸಾರಕ್ಕೆ ಸಿದ್ಧವಾಗಿದ್ದ ಮಾಧ್ಯಮಗಳಿಗೆ ಬ್ರೇಕ್ ಹಾಕಲಾಗಿದೆ.
ಅಕ್ಟೋಬರ್ 28 ರ ಬುಧವಾರ ಸಂಜೆ 6.30 ರಿಂದ ನವೆಂಬರ್ 7ರ ತನಕ ಎಲೆಕ್ಟ್ರಾನಿಕ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ. ಇದೇ ನಿಯಮ ಪ್ರಿಂಟ್ ಹಾಗೂ ವೆಬ್ ಮೀಡಿಯಾಗಳಿಗೂ ಅನ್ವಯವಾಗಲಿದ್ದು, ಯಾವ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವಂತಿಲ್ಲ. ಇದು ಬಿಹಾರದ ವಿಧಾನಸಭೆ ಚುನಾವಣೆ, ಲೋಕಸಭೆ ಉಪ ಚುನಾವಣೆ ಎರಡಕ್ಕೂ ಅನ್ವಯವಾಗಲಿದೆ ಎಂದು ಆಯೋಗ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








