ನವದೆಹಲಿ
ಬಿಹಾರ ವಿಧಾನಸಭಾ ಚುನಾವಣೆ ಕಣ ರಂಗೇರಿದೆ. ಭಾರತೀಯ ಜನತಾ ಪಕ್ಷದ ಚುನಾವಣೆ ಉಸ್ತುವಾರಿಯಾಗಿ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ರನ್ನು ನೇಮಕಗೊಳಿಸಿ ಆದೇಶಿಸಿದೆ.
ನವದೆಹಲಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಭೂಪೇಂದರ್ ಯಾದವ್ ಸಭೆಯಲ್ಲಿ ಹಾಜರಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಿವಾಸದಲ್ಲಿ ನಡೆದ ಸಭೆ ಬಳಿಕ ಬಿಜೆಪಿ ಮುಖಂಡ ಭೂಪೇಂದರ್ ಯಾದವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್ ಡಿಎ ಘಟಬಂಧನ್ ಬಿಹಾರ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








