ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಫಡ್ನವೀಸ್..!

ಮುಂಬೈ

     ಸರ್ಕಾರ ರಚನೆಯಲ್ಲಿ ಆಗಿರುವ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಜತೆಯಲ್ಲಿ ಸಚಿವ ಸಂಪುಟ ಕೂಡ ರಾಜ್ಯಪಾಲರಿಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದು.ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ ದೇವೇಂದ್ರ ಫಡ್ನವೀಸ್ ಮತ್ತು ಅವರ ಸಂಪುಟದ ಸಚಿವರು ರಾಜೀನಾಮೆ ಪತ್ರ ಸಲ್ಲಿಸಿದರು ಎಂದು ತಿಳಿದು ಬಂದಿದೆ.

    ರಾಜ್ಯ ವಿಧಾನಸಭೆ ವಿಸರ್ಜನೆಗೆ ಸಮಯವಿದ್ದರೂ ಅದಕ್ಕೂ ಮುನ್ನ ಫಡ್ನವೀಸ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ .ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಮೂರು ವಾರ ಕಳೆದರೂ ಸರ್ಕಾರ ರಚನೆಯ ತಿಕ್ಕಾಟ ಪರಿಹಾರ ಕಂಡಿಲ್ಲ. ಸರ್ಕಾರ ರಚನೆಯಾಗುವವರೆಗೂ ಫಡ್ನವೀಸ್ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿ ಯಲಿದ್ದಾರೆ ಎಂದು ಭಾವಿಸಲಾಗಿತ್ತು. ಈಗ ಫಡ್ನವೀಸ್ ರಾಜೀನಾಮೆ ನೀಡಿರುವುದರಿಂದ ಮಹಾರಾಷ್ಟ್ರದಲ್ಲಿ ಅಧಿಕೃತವಾಗಿ ಆಡಳಿತ ಸ್ಥಗಿತಗೊಂಡಂತಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ