ರಸಗೊಬ್ಬರ ಪ್ರಮಾಣ ಕಡಿಮೆ ಮಾಡಲು ಚಿಂತನೆ : ಡಿ.ವಿ. ಸದಾನಂದಗೌಡ

ನವದೆಹಲಿ

    ಪರಿಸರಕ್ಕೆ ಮಾರಕವಾಗಿರುವ ರಸಗೊಬ್ಬರ ಬಳಕೆ ಪ್ರಮಾಣವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದಗೌಡ ಹೇಳಿದ್ದಾರೆ

    ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿರುವ ಅವರು, ರಸಗೊಬ್ಬರ ಬಳಕೆ ಪ್ರಮಾಣವನ್ನು ಮುಂಬರುವ ವರ್ಷಗಳಲ್ಲಿ ಕಡಿಮೆ ಮಾಡಿ, ಸಾವಯವ ಗೊಬ್ಬರ ಉತ್ಪಾದನೆ ಹೆಚ್ಚಿಸಲು ಸರ್ಕಾರ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರಿಂದ ಪರಿಸರ ಸಂರಕ್ಷಣೆ ಸಾಧ್ಯವಾಗಲಿದ್ದು, ಸಾವಯವ ಗೊಬ್ಬರ ಉತ್ಪಾದನೆ ಮಾಡುವವರಿಗೂ ಸಬ್ಸಿಡಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

    ರಾಜ್ಯಗಳಿಗೆ ಅಗತ್ಯವಾಗಿರುವ ಯೂರಿಯಾ ಸೇರಿದಂತೆ ಬೇಕಾದ ರಸಗೊಬ್ಬರವನ್ನು ಸಕಾಲದಲ್ಲಿ ಪೂರೈಕೆ ಮಾಡಲಾಗುತ್ತಿದೆ. ರಸಗೊಬ್ಬರ ಬಳಕೆ ಸಂಬಂಧ ವಾರ್ಷಿಕ 72 ಸಾವಿರ ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ನೇರ ಸೌಲಭ್ಯ ವರ್ಗಾವಣೆ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸದಾನಂದ ಗೌಡ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link