ನವದೆಹಲಿ:

ಹತ್ತು ವರ್ಷದ ಹಿಂದೆ ನಡೆದಿದ್ದ ಮಾಲೆಗಾಂವ್ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಬಾಗಿಯಾದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್, ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಐವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (ಯುಎಪಿಎ) ಮತ್ತು ಐಪಿಸಿ ಸೆಕ್ಷನ್ ಗಳಡಿಯಲ್ಲಿ ದೋಷಾರೋಪವನ್ನು ರದ್ದುಗೊಳಿಸಲು ವಿಶೇಷ ನ್ಯಾಯಾಲಯವು ನಿರಾಕರಿಸಿದೆ.
ವಿಶೇಷ ನ್ಯಾಶನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ನ್ಯಾಯಾಲಯದ ನ್ಯಾಯಾಧೀಶ ವಿನೋದ್ ಪದಾಲ್ಕರ್ ಆರೋಪಿಗಳ ವಿರುದ್ಧದ ದೋಷಾರೋಪವನ್ನು ರದುಗೊಳಿಸಲು ನಿರಾಕರಿಸಿದ್ದಾರೆ.ಅಲ್ಲದೆ ಪುರೋಹಿತ್ ಸೇರಿ ಎಲ್ಲಾ ಏಳು ಮಂದಿ ಆರೊಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿ ತನಿಖೆ ನಡೆಸಬೇಕೆಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
