ನವದೆಹಲಿ
ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 40 ಜನ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಏಮ್ಸ್ ಆಸ್ಪತ್ರೆಯ ಎರಡನೇಯ ಮಹಡಿಯಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಯತ್ನಿಸುತ್ತಿದ್ದಾರೆ. ಈ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ , ಈ ವರೆಗೆ ಯಾವುದೇ ಸಾವು-ನೋವಿನ ವರದಿ ಆಗಿಲ್ಲ.
ಬೆಂಕಿ ಕಾಣಿಸಿಕೊಂಡಿರುವ ಕೊಠಡಿಯು ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್‌ಗೆ ಸಮೀಪವೇ ಇರುವ ಕಾರಣ ಎಮರ್ಜೆನ್ಸಿ ವಾರ್ಡ್ ಅನ್ನು ಮುಚ್ಚಲಾಗಿದೆ, ಬೆಂಕಿ ಕಾಣಿಸಿಕೊಂಡಿರುವ ಕೊಠಡಿಗಳು ಆಸ್ಪತ್ರೆಯ ತರಬೇತಿ ಕೊಠಡಿಗಳಾಗಿದ್ದವು ಎಂದು ಆಸ್ಪತ್ರೆ ವರ್ಗಗಳು ತಿಳಿಸಿವೆ.
ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಇದೇ ಏಮ್ಸ್ ಆಸ್ಪತ್ರೆಯಲ್ಲಿ ಪ್ರಸ್ತುತ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತಿದೆ. ಅರುಣ್ ಜೇಟ್ಲಿ ಅವರು ತೀವ್ರ ನಿಗಾ ಘಟಕದಲ್ಲಿದ್ದಾರೆ. ಇಂದು ಬೆಳಿಗ್ಗೆ ಅಷ್ಟೆ ಈ ಆಸ್ಪತ್ರೆಗೆ ಗೃಹ ಮಂತ್ರಿ ಅಮಿತ್ ಶಾ ಭೇಟಿ ನೀಡಿದ್ದರು.
. ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
