ಕಾಶ್ಮೀರಕ್ಕೆ ಮೊದಲ ವಿದೇಶಿ ರಾಜತಾಂತ್ರಿಕರ ತಂಡ ಭೇಟಿ

ನವದೆಹಲಿ:

     ವಿಶೇಷ ಸ್ಥಾನಮಾನ ರದ್ದತ್ತಿ ಬಳಿಕ ಕಾಶ್ಮೀರದ ವಸ್ತುಸ್ಥಿತಿಯ ಪರಿಶೀಲನೆ ಮತ್ತು ಪರಿಸ್ಥಿತಿ ಸಹಜತೆಯ ಅಧ್ಯಯನಕ್ಕಾಗಿ ಆಗಮಿಸಿರುವ 15 ಮಂದಿ ವಿದೇಶಿ ರಾಜತಾಂತ್ರಿಕರ ನಿಯೋಗ ಇಂದು ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದೆ.

     ಕಳೆದ ಆಗಸ್ಟ್ನಲ್ಲಿ ಕೇಂದ್ರ ಸರ್ಕಾರ ವಿಶೇಷ ಸ್ಥಾನಮಾನ ವಾಪಾಸು ಪಡೆದು ಈ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡುವ ಇಂಗಿತವನ್ನು ವಿದೇಶಿ ರಾಜತಾಂತ್ರಿಕರು ವ್ಯಕ್ತಪಡಿಸಿದ್ದು,ನಿಯೋಗವು ನೂತನ ಕೇಂದ್ರಾಡಳಿತ ಪ್ರದೇಶದಲ್ಲಿ ಎರಡು ದಿನಗಳ ಪ್ರವಾಸ ಮಾಡಲಿದೆ ಎಂದು ಉನ್ನತ ಮೂಲಗಳು ಹೇಳಿವೆ. ಮಧ್ಯಪ್ರಾಚ್ಯ, ಆಫ್ರಿಕಾ ಹಾಗೂ ಲ್ಯಾಟಿನ್ ಅಮೆರಿಕ ಹೀಗೆ ವಿಭಿನ್ನ ಪ್ರದೇಶಗಳಿಂದ ರಾಜತಾಂತ್ರಿಕರನ್ನು ಆಯ್ಕೆ ಮಾಡಲಾಗಿದ್ದು, ವಿಶೇಷ ಸ್ಥಾನಮಾನ ವಾಪಸಾತಿ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಮೊದಲ ವಿದೇಶಿ ನಿಯೋಗ ಇದಾಗಿದೆ.

   ರಾಜ್ಯದಲ್ಲಿನ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರನ್ನು ರಾಜತಾಂತ್ರಿಕ ನಿಯೋಗದ ಸದಸ್ಯರು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ . ಗುರುವಾರ ನಿಯೋಗದ ಜತೆ ಮಾತುಕತೆಗೆ ಸಜ್ಜಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾಗಿ ಹಲವು ಮಂದಿ ಜನಪ್ರತಿನಿಧಿಗಳು ವಿವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap