ನವದೆಹಲಿ:
ವಿಶೇಷ ಸ್ಥಾನಮಾನ ರದ್ದತ್ತಿ ಬಳಿಕ ಕಾಶ್ಮೀರದ ವಸ್ತುಸ್ಥಿತಿಯ ಪರಿಶೀಲನೆ ಮತ್ತು ಪರಿಸ್ಥಿತಿ ಸಹಜತೆಯ ಅಧ್ಯಯನಕ್ಕಾಗಿ ಆಗಮಿಸಿರುವ 15 ಮಂದಿ ವಿದೇಶಿ ರಾಜತಾಂತ್ರಿಕರ ನಿಯೋಗ ಇಂದು ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದೆ.
ಕಳೆದ ಆಗಸ್ಟ್ನಲ್ಲಿ ಕೇಂದ್ರ ಸರ್ಕಾರ ವಿಶೇಷ ಸ್ಥಾನಮಾನ ವಾಪಾಸು ಪಡೆದು ಈ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡುವ ಇಂಗಿತವನ್ನು ವಿದೇಶಿ ರಾಜತಾಂತ್ರಿಕರು ವ್ಯಕ್ತಪಡಿಸಿದ್ದು,ನಿಯೋಗವು ನೂತನ ಕೇಂದ್ರಾಡಳಿತ ಪ್ರದೇಶದಲ್ಲಿ ಎರಡು ದಿನಗಳ ಪ್ರವಾಸ ಮಾಡಲಿದೆ ಎಂದು ಉನ್ನತ ಮೂಲಗಳು ಹೇಳಿವೆ. ಮಧ್ಯಪ್ರಾಚ್ಯ, ಆಫ್ರಿಕಾ ಹಾಗೂ ಲ್ಯಾಟಿನ್ ಅಮೆರಿಕ ಹೀಗೆ ವಿಭಿನ್ನ ಪ್ರದೇಶಗಳಿಂದ ರಾಜತಾಂತ್ರಿಕರನ್ನು ಆಯ್ಕೆ ಮಾಡಲಾಗಿದ್ದು, ವಿಶೇಷ ಸ್ಥಾನಮಾನ ವಾಪಸಾತಿ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಮೊದಲ ವಿದೇಶಿ ನಿಯೋಗ ಇದಾಗಿದೆ.
