ಸುಪಾಲ್:
ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ಅವರ ಅಂತಿಮ ಸಂಸ್ಕಾರವನ್ನು ಗನ್ ಸಲ್ಯೂಟ್ ಇಲ್ಲದೆ ನಡೆಸಿರುವ ಘಟನೆ ವರದಿಯಾಗಿದೆ. ಸಕಲ ಸರ್ಕಾರಿ ಲಾಂಚನಗಳೊಂದಿಗೆ ಅಂತಿಮ ಸಂಸ್ಕಾರವನ್ನು ನೆರವೇರಿಸಲೆಂದು ಸರ್ಕಾರ ಕ್ರಮ ಕೈಗೊಂಡಿತ್ತು ಆದರೆ ಗನ್ ಸಲ್ಯೂಟ್ ನಡೆಯು ಸಂದರ್ಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ಯಾವ ಬಂದೂಕು ಸಹ ಕೆಲಸ ಮಾಡಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.
ಅಂತ್ಯಕ್ರಿಯೆಗಾಗಿ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ 22 ರೈಫಲ್‌ಗಳ ಪೈಕಿ ಯಾವುದೂ ಸಹ ಸಿಡಿಯದ ಕಾರಣ ಗನ್ ಸಲ್ಯೂಟ್ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು ಎಂದು ಪೊಲೀಸ್ ಇಲಾಖೆ ತಿಳಿಸಿದೆ.ಇದರ ಬಗ್ಗೆ ಕುಲಂಕುಶವಾಗಿ ತನಿಖೆಯನ್ನು ನಡೆಸಲು ಆದೇಶ ನೀಡಲಾಗಿದೆ ಎಂದು ಅದು ಹೇಳಿದೆ.
ಶ್ರೀ ಮಿಶ್ರಾ ಅವರ ಅಂತ್ಯಕ್ರಿಯೆ ಸುಪಾಲ್ ಜಿಲ್ಲೆಯ ಅವರ ಪೂರ್ವಜರ ಗ್ರಾಮದಲ್ಲಿ ನಡೆಯಿತು ಮತ್ತು ಇದರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಮತ್ತು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಭಾಗವಹಿಸಿದ್ದರು.
ಶವಸಂಸ್ಕಾರದ ಸಮಯದಲ್ಲಿ, ಮುಖ್ಯಮಂತ್ರಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಶ್ರೀ ಮಿಶ್ರಾ ಅವರಿಗೆ ಗನ್ ಸೆಲ್ಯೂಟ್ ನೀಡುವ ಪ್ರಯತ್ನದಲ್ಲಿ ಪೊಲೀಸರು ವಿಫಲರಾಗಿದ್ದು ಇದು ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ.ಗನ್ ಸಲ್ಯೂಟ್ ಮಾಡಲು ನಡೆಸಿದ ಎಲ್ಲಾ ಪ್ರಯತ್ನಗಳೂ ವಿಫಲವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








