ನವದೆಹಲಿ:
ಮಹಾಮಾರಿ ಕೊರೊನಾ ವೈರಸ್ ಗೆ ಕಡಿವಾಣ ಹಾಕಲು ಪ್ರಧಾನಮಂತ್ರಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಆಗಿದೆ ಇನ್ನಾದರೂ ಅಧೋಗತಿ ತಲುಪುತ್ತಿರುವ ಆರ್ಥಿಕತೆ ಕಡೆ ಗಮನ ಕೊಡಿ ಎಂದು ಚಿದಂಬರಂ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಜನತಾ ಕರ್ಫ್ಯೂಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇಡೀ ಭಾರತಕ್ಕೆ ಭಾರತವೇ ಸ್ತಬ್ಧವಾಗಿದೆ. 14 ಗಂಟೆಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರವೇನೋ ಯಶಸ್ವಿಯಾಗಿದೆ. ಇದರ ನಡುವೆ ಭಾರತೀಯರು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಎಂದಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೇಂದ್ರವು ಅನುದಾನವನ್ನು ಘೋಷಿಸಬೇಕು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿ ತೀರ್ಮಾನದಿಂದ ಹಲವು ರಾಜ್ಯಗಳು ಪ್ರೇರೇಪಣೆಯನ್ನು ಪಡೆದುಕೊಂಡಿವೆ. ಕೇಂದ್ರ ಸರ್ಕಾರವು 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವುದಾಗಿ ಘೋಷಿಸಿದ್ದು, ಇದರ ನಡುವೆ ಹಲವು ರಾಜ್ಯಗಳಲ್ಲಿ ಜನತಾ ಕರ್ಫ್ಯೂವನ್ನು ಮುಂದುವರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ