ನವದೆಹಲಿ:
ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುತ್ತಿರುವ ನಡುವೆಯೂ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ವಾರಿಯರ್ಸ್‌ಗಳಾಗಿರುವ ಪತ್ರಕರ್ತರಿಗೆ ಉತ್ತರ ಪ್ರದೇಶ ಸರ್ಕಾರ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ ಒತ್ತಾಯಿಸಿದ್ದಾರೆ.
ಲಕ್ನೋ ದಲ್ಲಿ ಯುವ ಪತ್ರಕರ್ತ ನೀಲಾಂಶು ಶುಲ್ಕಾ ಅವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಿಯಾಂಕ ವಾದ್ರಾ ಅವರು ‘ಪತ್ರಕರ್ತರಿಗೆ ವಿಮಾ ಸೌಲಭ್ಯ ಕಲ್ಪಿಸಿ’ ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
