ಪಣಜಿ:
ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಪ್ರಮೋದ್ ಸಾವಂತ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಖಚಿತ ಪಡಿಸಿದ್ದಾರೆ.
ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಇಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.
ಗೋವಾ ರಾಜ್ಯದಲ್ಲಿ ಇದುವರೆಗೆ 17,418 ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದುವರೆಗೆ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ದೇಶದ ಸೋಂಕಿತರ ಸಂಖ್ಯೆ 3.77 ಮಿಲಿಯನ್ ದಾಟಿದೆ. ಸಾವಿನ ಸಂಖ್ಯೆ 66,333ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ