ವೈಧ್ಯರ ರಕ್ಷಣೆಗೆ ಕಾಯ್ದೆ ತರಲು ಮುಂದಾದ ಕೇಂದ್ರ ಸರ್ಕಾರ .!!

ನವದೆಹಲಿ:

    ಕೆಲವು ರಾಜ್ಯಗಳಲ್ಲಿ ವೈದ್ಯರ ಮೇಲಾಗುತ್ತಿರುವ ಹಲ್ಲೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಗಲಾಟೆಗಳು ನಡೆದಿದ್ದವು.ಕೆಲವು ಸಿಬ್ಬಂದಿಗಳ ಮೇಲೆ ಹಲ್ಲೆಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕಾನೂನು ತರಲು ಮುಂದಾಗುತ್ತಿದೆ.

    ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ ಅಂತಹವರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೂ ದಂಡ ವಿಧಿಸುವ ಕಾಯ್ದೆ ತರಲು ಕಂದ್ರ ಮುಂದಾಗುತ್ತಿದೆ. ವೈದ್ಯರ ಮೇಲಿನ ದಾಳಿ, ಹಲ್ಲೆ ರೀತಿಯ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

    ಈ  ಸಂಬಂಧ ಸಾರ್ವಜನಿಕ ಅಭಿಪ್ರಾಯಗಳ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದ್ದು. ಆರೋಗ್ಯ ಸಚಿವಾಲಯ ಆರೋಗ್ಯಪಾಲನೆ ಸೇವೆಗಳ ಸಿಬ್ಬಂದಿ ಮತ್ತು ಕ್ಲಿನಿಕಲ್ ಎಸ್ಟಾಬ್ಲಿಷ್‍ಮೆಂಟ್ಸ್ ಕರಡು ಮಸೂದೆ -2019 ನಿಯಮಗಳನ್ನು ರೂಪಿಸಿದೆ. ಅಲ್ಲದೆ ಸಾರ್ವಜನಿಕರು 30 ದಿನಗಳ ಒಳಗೆ ತಮ್ಮ ಅಭಿಪ್ರಾಯಗಳನ್ನು us-ms-mohfw@nic.in ಗೆ ಮೇಲ್ ಮಾಡಿ ತಿಳಿಸಲಾಗಿದೆ

    ಭಾರತೀಯ ದಂಡ ಸಂಹಿತೆ(ಐಪಿಸಿ) 320ನೇ ಕಲಂ ಇಟ್ಟುಕೊಂಡು ಈ ಕಾಯ್ದೆಯನ್ನು ರಚಿಸಲು ಸಕಾರ ಮುಂದಾಗಿದೆ. ಕರ್ತವ್ಯ ಸಲ್ಲಿಸುವ ವೇಳೆ ರೋಗಿಗಳ ಕುಟುಂಬ ಅಥವಾ ಅವರ ಕಡೆಯವರು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಕನಿಷ್ಠ ಮೂರು ವರ್ಷ, ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದರ ಜೊತೆಗೆ ಕನಿಷ್ಠ 2 ಲಕ್ಷದಿಂದ 10 ಲಕ್ಷ ರೂ. ದಂಡ ವಿಧಿಸುವ ಅಂಶ ಈ ಕರಡು ಮಸೂದೆಯಲ್ಲಿದೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap