ಚೆನ್ನೈ:
ನೆರೆಯ ಶ್ರೀಲಂಕಾದಿಂದ ನಮ್ಮ ದೇಶದ ತಮಿಳುನಾಡಿಗೆ ಭಯೋತ್ಪಾದಕರು ಬಂದಿದ್ದಾರೆ ಎಂದು ಸುದ್ಧಿ ಬಂದ ಕ್ಷಣದಿಂದ ಿಡೀ ತಮಿಳು ನಾಡುನಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ಉಗ್ರರ ನುಸುಳುವಿಕೆ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನಾಧರಿಸಿ ತಮಿಳುನಾಡಿನಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 6 ಭಯೋತ್ಪಾದಕರು ಒಳನುಸುಳಿರುವ ಶಂಕೆ ವ್ಯಕ್ತವಾಗಿದೆ ಮತ್ತು ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಮಿಳು ನಾಡು ಪೊಲೀಸರು ತಿಳಿಸಿದ್ದಾರೆ.
ಕೊಯಂಬತ್ತೂರಿನ ಸಿಟಿ ಪೊಲೀಸರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲು ಮನವಿ ಮಾಡಿದ್ದು. ಭಾರತಕ್ಕೆ ನುಸುಳಿರುವ ಭಯೋತ್ಪಾದಕರ ಗುಂಪಿನಲ್ಲಿ ಓರ್ವ ಪಾಕಿಸ್ತಾನಿ ಹಾಗೂ ಐವರು ಶ್ರೀಲಂಕಾದ ತಮಿಳು ಮುಸ್ಲಿಮರು ಎಂದು ತಿಳಿದು ಬಂದಿದೆ ಧಾರ್ಮಿಕ ಮಹತ್ವವುಳ್ಳ ಕ್ಷೇತ್ರಗಳು, ಪ್ರವಾಸಿ ತಾಣಗಳು, ಜನಸಂದಣಿ ಹೆಚ್ಚಿರುವ ಪ್ರದೇಶ, ಪ್ರಮುಖ ರಾಜಕಾರಣಿಗಳು ಹಾಗೂ ಸಂಘಸಂಸ್ಥೆಗಳೇ ಇವರ ಟಾರ್ಗೆಟ್ ಎಂದು ಹೇಳಲಾಗಿದೆ.
ನಗರದ ಬಸ್ ಸ್ಟಾಂಡ್ , ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಕಮೀಷನರ್ ತಿಳಿಸಿದ್ದಾರೆ.ಇನ್ನು ಅನುಮಾನಾಸ್ಪದ ವ್ಯಕ್ತಿಗಳನ್ನು ಕುಲಂಕುಶವಾಗಿ ಪರಿಶೀಲಿಸಿ ಬಿಡಲು ಆದೇಶ ನೀಡಲಾಗಿದೆ .ಸಾರ್ವಜನಿಕರಿಗೆ ಆಗಾಗ್ಗೆ ಎಚ್ಚರಿಕೆಯ ಸಂದೇಶಗಳನ್ನು ರವಾನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ