ಕೇರಳ-ಕರ್ನಾಟಕದ ಗಡಿ ನಿರ್ಬಂಧ ತೆರವಿಗೆ ಕೇಂದ್ರಕ್ಕೆ ಕೇರಳ ಹೈಕೋರ್ಟ್ ಸೂಚನೆ

ಕಾಸರಗೋಡು:

       ಕಾಸರಗೋಡು ಜಿಲ್ಲೆಯ ಕರ್ನಾಟಕ ಗಡಿ ರಸ್ತೆಗಳನ್ನು ತೆರೆಯಲು ಕ್ರಮ ಕೈಗೊಳ್ಳುವಂತೆ ಕೇರಳ ಹೈಕೋರ್ಟ್   ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. ತುರ್ತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದ್ದು, ಕೇಂದ್ರ ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ನಿರ್ದೇಶನ ನೀಡಿದೆ.

      ರಾಷ್ಟ್ರೀಯ ಹೆದ್ದಾರಿ ಮುಚ್ಚಿ ಉತ್ತರ ಕೇರಳದ ಜನರಿಗೆ ಚಿಕಿತ್ಸೆ ನೀಡದೆ ಇರುವುದು ಮಾನವ ಹಕ್ಕುಗಳ ವಿಷಯವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರ ಅಧಿಕಾರವನ್ನು ಹೊಂದಿದೆ.

     ಈ ಉದ್ದೇಶಕ್ಕಾಗಿ ಅಡೆತಡೆಗಳನ್ನು ತೆಗೆದುಹಾಕುವುದು ಕೇಂದ್ರ ಸರಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕರ್ನಾಟಕ ಸರಕಾರ ಹೆದ್ದಾರಿ ಮುಚ್ಚಿರುವ ಅಡೆತಡೆಗಳನ್ನು ತೆಗೆದುಹಾಕಲು ಕೊಡಲೇ ಮಧ್ಯಪ್ರವೇಶಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಈ ವಿಷಯದಲ್ಲಿ ಕೂಡಲೇ ಕೇಂದ್ರ ಮಧ್ಯಪ್ರವೇಶಿಸುವ ನಿರೀಕ್ಷೆಯಿದೆ ಎಂದು ಆದೇಶದಲ್ಲಿ ತಿಳಿಸಿದೆ.
 
    ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರು ಕರ್ನಾಟಕ ರಸ್ತೆಗಳನ್ನು ಕಳೆದ ವಾರ ಮುಚ್ಚಲಾಗಿತ್ತು. ಕಾಸರಗೋಡಿನ ಆರು ಜೀವಗಳು ಸರಿಯಾದ ಚಿಕಿತ್ಸೆ ಲಭಿಸದೆ ಹೋಗಿದೆ. ಪ್ರಧಾನ ಕಾರ್ಯದರ್ಶಿ ಮಾತುಕತೆ ನಡೆಸಿದರೂ ಕರ್ನಾಟಕ ಸಂಚಾರಕ್ಕೆ ಅವಕಾಶ ನೀಡಿಲ್ಲ. ಕರ್ನಾಟಕ ಸರಕಾರ ಅಮಾನವೀಯವಾಗಿ ನಡೆದುಕೊಂಡಿದೆ ಎಂದು ಕೇರಳ ಸರಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link