ನವದೆಹಲಿ:
ಕೆಲ ದಿನಗಳ ಹಿಂದೆಯಷ್ಟೇ ಜೆಎನ್‍ಯು ಕ್ಯಾಂಪಸ್ ನಲ್ಲಿ ನಡೆದ ಹಿಂಸಾಚಾರದ ಕುರಿತಂತೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿರುವ ವೇಳೆಯಲ್ಲಿ ಹಿಂಸಾಚಾರದ ಜವಾಬ್ದಾರಿಯನ್ನು ‘ಹಿಂದೂ ರಕ್ಷಾ ದಳ’ ಎಂಬ ಸಂಘಟನೆ ಹೊತ್ತುಕೊಂಡಿದೆ. ಸಂಘಟನೆಯ ಅಧ್ಯಕ್ಷ ಪಿಂಕಿ ಚೌಧರಿ ಸ್ವತಃ ಘಟನೆಯು ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಕ್ಯಾಂಪಸ್ ನಲ್ಲಿ ರಾಷ್ಟ್ರ ವಿರೋಧಿ ಚಟುವಟಿಗಳು ನಡೆಯುತ್ತಿದ್ದು ಅದನ್ನು ನಾವು ಸಹಿಸುವುದಿಲ್ಲ ಎಂದಿದ್ದಾರೆ.ಕ್ಯಾಂಪಸ್ ನಲ್ಲಿ ನಡೆದ ಘಟನೆಯ ಸಂಬಂಧ ಸೋಷಿಯಲ್ ಮಿಡಿಯಾಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು ಈ ವಿಡಿಯೋದಲ್ಲಿ ಮಾತನಾಡಿರುವ ಪಿಂಕಿ ಚೌಧರಿ ಕ್ಯಾಂಪಸ್‍ನಲ್ಲಿ ನಡೆದ ಹಿಂಸಾಚಾರದ ಹಿಂದೆ ನಮ್ಮ ಸಂಘಟನೆಯ ಪಾತ್ರವಿದೆ. ನಮ್ಮ ಸಂಘಟನೆಯ ಸದಸ್ಯರು ಈ ಘಟನೆಯಲ್ಲಿ ಭಾಗಿಯಾಗಿದ್ದು ನಾವು ಈ ದಾಳಿಯನ್ನು ಒಪ್ಪಿಕೊಳುತ್ತೇವೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ