ಭೋಪಾಲ್:
ಮಧ್ಯಪ್ರದೇಶದ ರೆಬೆಲ್ ಶಾಸಕರ ರಾಜಿನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಬೆನ್ನಲ್ಲೇ ಸಿಎಂ ಕಮಲ್ ನಾಥ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಮಧ್ಯ ಪ್ರದೇಶ ರಾಜ್ಯಪಾಲ ಪ್ರಜಾಪತಿ ಅವರು ಕಾಂಗ್ರೆಸ್ ಪಕ್ಷದ 16 ಮಂದಿ ರೆಬೆಲ್ ಶಾಸಕರ ರಾಜಿನಾಮೆಯನ್ನು ಅಂಗೀಕರಿಸಿದ್ದರು. ಆ ಮೂಲಕ ಸಿಎಂ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಲ್ಪ ಮತಕ್ಕೆ ಕುಸಿದಿತ್ತು. ಈ ಹಿನ್ನಲೆಯಲ್ಲಿ ಇಂದು ವಿಶ್ವಾಸಮತಕ್ಕೂ ಮೊದಲೇ ಸಿಎಂ ಕಮಲ್ ನಾಥ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಮಲ್ ನಾಥ್ ಅವರು, ಇಂದು ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು ಜನರಿಂದ ಆಯ್ಕೆಯಾದ ಸರ್ಕಾರವನ್ನು ಹಣಬಲ ಮತ್ತು ತೋಳ್ಬಲದಿಂದ ಬಿಜೆಪಿ ಉರುಳಿಸುವ ಕೆಲಸ ಮಾಡಿದೆ. ಮಧ್ಯ ಪ್ರದೇಶವನ್ನು ಸೋಲಿಸಿ ತಾನು ಗೆಲ್ಲಲು ಬಿಜೆಪಿ ಮುಂದಾಗಿದೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ