ಅಕ್ರಮ ಕಲ್ಲಿದ್ದಲು ಗಣಿಗಾರಿಕೆ: ಮೇಘಾಲಯ ಸರ್ಕಾರಕ್ಕೆ 100 ಕೋಟಿ ದಂಡ..!!

ಹೊಸದಿಲ್ಲಿ :

     ರಾಜ್ಯಗಳ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯನ್ನು ತಡೆಯಲು ವಿಫ‌ಲವಾದ ಮೇಘಾಲಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಂಡಳಿ 100 ಕೋಟಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

      ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ವಿಧಿಸಿರುವ 100 ಕೋಟಿ ರೂ. ದಂಡವನ್ನು ಕೇಂದ್ರ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಠೇವಣಿ ಇಡುವಂತೆ ಸುಪ್ರೀಂ ಕೋರ್ಟ್‌ ಇಂದು ಬುಧವಾರ ಮೇಘಾಲಯ ಸರ್ಕಾರಕ್ಕೆ ಆದೇಶಿಸಿದೆ.

     ಇನ್ನು ಈ ಅಕ್ರಮ ಗಣಿಗಾರಿಕೆಯ ಮೂಲಕ ಸಂಗ್ರಹಿಸಲಾಗಿದ ಎಲ್ಲಾ ಕಲ್ಲಿದ್ದಲನ್ನು ಕೋಲ್‌ ಇಂಡಿಯಾ ಲಿಮಿಟೆಡ್‌ ಸಂಸ್ಥೆಯ ವಶಕ್ಕೆ ಒಪ್ಪಿಸುವಂತೆ ಜಸ್ಟಿಸ್‌ ಅಶೋಕ್‌ ಭೂಷಣ್‌ ಮತ್ತು ಜಸ್ಟಿಸ್‌ ಕೆ ಎಂ ಜೋಸೆಫ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ ನ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ .

     ಕೋಲ್‌ ಇಂಡಿಯಾ ಲಿಮಿಟೆಡ್‌ ಸಂಸ್ಥೆಗೆ ಹಸ್ತಾಂತರವಾಗುವ ಈ ಅಕ್ರಮ ಕಲ್ಲಿದ್ದಲನ್ನು ಹರಾಜು ಹಾಕಿ ಅದರಿಂದ ಬರುವ ಹಣವನ್ನು ರಾಜ್ಯ ಸರ್ಕಾರದಲ್ಲಿ ಠೇವಣಿ ಇರಿಸಬೇಕು ಎಂದು ಕೋರ್ಟ್‌ ಹೇಳಿತು. ಕಳೆದ ಜನವರಿ 4ರಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಮೇಘಾಲಯ ಸರ್ಕಾರಕ್ಕೆ ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯನ್ನು ತಡೆಯಲು ವಿಫ‌ಲವಾದುದಕ್ಕೆ 100 ಕೋಟಿ ರೂ. ದಂಡ ವಿಧಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ