ನವದೆಹಲಿ:
ಮಹಾಮಾರಿಯಾದ ಕೊರೋನಾ ವೈರಸ್ ನ ಕೆಟ್ಟ ಮತ್ತು ಭಯಾನಕ ಹಂತವನ್ನು ಭಾರತ ದಾಟಿದೆ, ಹೀಗಿದ್ದರೂ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಹೌದು ನಾವು ಕೊರೋನಾದ ಕೆಟ್ಟ ಹಂತವನ್ನು ದಾಟಿದ್ದೇವೆ, ಆದರೆ ಇನ್ನೂ ಸಂಪೂರ್ಣವಾಗಿ ಕೊರೋನಾ ಮುಕ್ತವಾಗಿಲ್ಲ, ಲಾಕ್ ಡೌನ್ ನಿಂದಾಗಿ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ಪರಿಸ್ಥಿತಿ ಸ್ವಲ್ಪ ಉತ್ತಮವಾಗಿದೆ ಎಂದು ಹೇಳಿದ್ದಾರೆ.ಸದ್ಯ ಮೂರನೇ ಹಂತದ ಲಾಕ್ ಡೌನ್ ನಲ್ಲಿದ್ದೇವೆ, ಲಾಕ್ ಡೌನ್ ನಿಂದಾಗಿ ಕೊರೋನಾ ಹರಡುವ ಪ್ರಮಾಣ ಕಡಿಮೆಯಾಗುತ್ತದೆ, ಹೀಗಾಗಿ ಮತ್ತೆ 2 ವಾರಗಳ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








