ಪೌರತ್ವ ಕಾಯ್ದೆ ಪ್ರತಿಭಟನೆ :ದೇಶಬಿಟ್ಟು ತೆರಳುವಂತೆ ವಿದೇಶಿ ಮಹಿಳೆಗೆ ಸೂಚನೆ

ಕೊಚ್ಚಿನ್:

   ದೇಶದಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರಣಕ್ಕಾಗಿ ನಾರ್ವೇ ದೇಶದಿಂದ ಬಂದಿರುವ ಪ್ರವಾಸಿಯೊಬ್ಬರಿಗೆ ದೇಶ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ.

   ಡಿಸೆಂಬರ್ 23ರಂದು ಕೇರಳದ ಕೊಚ್ಚಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದ ನಾರ್ವೆ ದೇಶದ ಪ್ರಜೆ, 71 ವರ್ಷದ ಜೇನ್ನ್-ಮೆಟ್ಟೆ ಜೊಹಾನ್ಸನ್ ಎಂಬುವವರನ್ನು ತಕ್ಷಣ ದೇಶ ಬಿಟ್ಟು ತೆರಳುವಂತೆ ಸೂಚಿಸಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಅವರು ಭಾರತದ ವೀಸಾ ನಿಯಮಾವಳಿಯನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಕಾನೂನಾತ್ಮಕವಾಗಿಯೇ ಅವರಿಗೆ ದೇಶ ಬಿಟ್ಟು ತೆರಳಲು ಸೂಚಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿ ಅನೂಪ್ ಕೃಷ್ಣನ್, ‘ಜೊಹಾನ್ಸನ್ ಅವರನ್ನು ದೇಶ ಬಿಟ್ಟು ತೆರಳಲು ಸೂಚಿಸಲಾಗಿದೆ. ಇನ್ನು ಈ ಸೂಚನೆ ಗಡೀಪಾರಿನ ಸೂಚನೆಯಂತೂ ಅಲ್ಲ. ಆಕೆ ಪ್ರತಿಭಟನೆಯಲ್ಲಿ ಭಾಗವಹಿಸಿ ವೀಸಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಆದಷ್ಟು ಬೇಗ ಇಲ್ಲಿಂದ ತೆರಳುವಂತೆ ಆಕೆಗೆ ಸೂಚಿಸಿದ್ದೇವೆ. ಆಕೆಯೇ ಸ್ವತಃ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಹಾಕಿದ್ದರು. ಸದ್ಯ ಆಕೆಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸಲಾಗಿಲ್ಲ ಎಂದು ಹೇಳಿದ್ದಾರೆ. 
    ಅಧಿಕಾರಿಗಳ ಈ ಸೂಚನೆಗೆ ಜೊಹಾನ್ಸನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ‘ಶುಕ್ರವಾರ ಸಂಜೆ 6 ಗಂಟೆಯೊಳಗಾಗಿ ದೇಶ ಬಿಟ್ಟು ತೆರಳದೇ ಇದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಲಿಖಿತ ಆದೇಶ ನೀಡುವಂತೆ ಅವರನ್ನು ಕೇಳಿದರೂ ಅವರು ನೀಡಿಲ್ಲ. ಇದು ಬೆದರಿಕೆ ಅಲ್ಲದೆ ಮತ್ತಿನ್ನೇನಲ್ಲ’ ಎಂದು ಹೇಳಿದ್ದಾರೆ.
   ಇನ್ನು ಜೊಹಾನ್ಸನ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಆಗಮಿಸಿದ್ದು ಮುಂಬೈ, ಲಖನೌಗೆ ಭೇಟಿ ನೀಡಿದ ನಂತರ ಒಂದು ವಾರದ ಹಿಂದೆ ಕೇರಳಕ್ಕೆ ಆಗಮಿಸಿದ್ದರು. ಆಕೆಯ ಟೂರಿಸ್ಟ್ ವೀಸಾ ಮಾರ್ಚ್ 2020ರಲ್ಲಿ ಕೊನೆಗೊಳ್ಳಲಿದೆ ಎಂದು ಅವರು ತಿಳಿಸಿದರು.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap