ವಿಜಯವಾಡ:

ಆಂಧ್ರಪ್ರದೇಶ ವಿಭಜನೆಯಾದ ಬಳಿಕ ಆಂಧ್ರದ ಎರಡನೇ ಮುಖ್ಯಮಂತ್ರಿಯಾಗಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಇಂದು ಆಂಧ್ರ ಪ್ರದೇಶ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.
ವಿಜಯವಾಡದ ಐಜಿಎಂಸಿ ಸ್ಟೇಡಿಯಂ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು,ಜೂ.07 ಕ್ಕೆ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯ ಮಂತ್ರಿ ಕೆ.ಚಂದ್ರಶೇಖರ್ ರಾವ್, ಡಿಎಂಕೆ ನಾಯಕ ಎಂ ಕೆ ಸ್ಟ್ಯಾಲಿನ್, ಪುದುಚೆರಿ ಆರೋಗ್ಯ ಸಚಿವ ಮಲ್ಲಡಿ ಕೃಷ್ಣ ರಾವ್ ವಿಶೇಷ ಅತಿಥಿಗಳಾಗಿ ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








