ಜೈಪುರ:
2008ರಲ್ಲಿ ಇಡೀ ದೇಶವನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಜೈಪುರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ , ಬಂಧಿತರಾದ 5 ಮಂದಿಯಲ್ಲಿ ನಾಲ್ಕು ಮಂದಿಯನ್ನು ದೋಷಿಗಳು ಮತ್ತು ಓರ್ವನನ್ನು ನಿರ್ಧೋಷಿ ಎಂದು ಆದೇಶಿಸಿದೆ.
11ವರ್ಷಗಳ ಹಿಂದೆ ಜೈಪುರದ 8 ಪ್ರದೇಶಗಳಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ ಸುಮಾರು 70 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರು ಮತ್ತು 185 ಮಂದಿ ಗಾಯಗೊಂಡಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆಯ ನಂತರ ಇಂದು ತೀರ್ಪು ನೀಡಿರುವ ವಿಶೇಷ ನ್ಯಾಯಾಲಯ ಪ್ರಕರಣದ ನಾಲ್ಕು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ.