ಭೋಪಾಲ್
ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ ರಾಜಕೀಯ ಹೈಡ್ರಾಮಕ್ಕೆ ಮಂಗಳವಾರ ಮತ್ತೊಂದು ತಿರುವು ಸಿಕ್ಕಿದೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ.ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ ಕಾಂಗ್ರೆಸ್‌ನ 14 ಶಾಸಕರು ರಾಜೀನಾಮೆ ನೀಡಿದ್ದು ಕಮಲನಾಥ್ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ. 16 ಕಾಂಗ್ರೆಸ್ ಶಾಸಕರು ಕರ್ನಾಟಕದ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ