ನವದೆಹಲಿ:
ಇಂದು ಇತ್ಯರ್ಥವಾಗಬೇಕಾಗಿದ್ದ ಅಯೋದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿ ಒಬ್ಬರಾದ ನ್ಯಾಯಮೂರ್ತಿ ಉದಯ್ ಲಲಿತ್ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.
ಪಂಚ ಸದಸ್ಯ ಪೀಠದಲ್ಲಿ ಉದಯ್ ಲಲಿತ್ ಅವರನ್ನು ಮುಂದುವರೆಸಲು ಮುಸ್ಲಿಂ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ಹಿಂದೆಸರಿದಿದ್ದಾರೆ ಎಂದು ಹೇಳಲಾಗಿದೆ. ಪ್ರಮುಖವಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಅವರು, 1994ರಲ್ಲಿ ಇದೇ ಪ್ರಕರಣದಲ್ಲಿ ವಕೀಲರಾಗಿ ವಾದ ಮಂಡಿಸಿದ್ದರು. ಬಳಿಕ ನ್ಯಾಯಮೂರ್ತಿಳಾಗಿ ಆಯ್ಕೆಯಾಗಿ ಇದೀಗ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠಕ್ಕೆ ಸೇರ್ಪಡೆಯಾಗಿದ್ದಾರೆ. ಹಾಗಾಗಿ, ಅವರು ಪಂಚ ಸದಸ್ಯ ಪೀಠದಲ್ಲಿರುವುದಕ್ಕೆ ತಮ್ಮ ಆಕ್ಷೇಪವಿದೆ ಎಂದು ಅರ್ಜಿದಾರರು ಹೇಳಿದ್ದರು.