ನವದೆಹಲಿ
ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಗೋವಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಯಿಂದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಹಿಂದೆ ಸರಿದಿದ್ದಾರೆ.
ಇದರಿಂದಾಗಿ ಈ ಪ್ರಕರಣದ ವಿಚಾರಣೆ ವಿಳಂಬವಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ ಕರ್ನಾಟಕವು ಮಹದಾಯಿ ಯೋಜನೆ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಗೋವಾ ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ ಸಲಿಸಿತ್ತು.
ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೀಠದಲ್ಲಿದ್ದ ಎಸ್.ಅಬ್ದುಲ್ ನಜೀರ್ ಇಂದು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ನಸೀರ್ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು.ಈ ಹಿನ್ನೆಲೆಯಲ್ಲಿ ಮಹದಾಯಿ ವಿವಾದದ ತೀರ್ಪು ನಿಷ್ಪಕ್ಷಪಾತವಾಗಿ ಹೊರಬೀಳಬೇಕೆಂಬ ಉದ್ದೇಶದಿಂದ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ಸ್ಥಾನಕ್ಕೆ ಮತ್ತೊಬ್ಬರ ನ್ಯಾಯಮೂರ್ತಿ ನೇಮಕಗೊಂಡ ನಂತರ ಗೋವಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ