ನವದೆಹಲಿ:
ಮಧ್ಯಪ್ರದೇಶ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ, ಕೇಸರಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬಿಜೆಪಿ ಸೇರ್ಪಡೆಯಾದರು.ಬಿಜೆಪಿ ಸಿಂಧಿಯಾ ಅವರನ್ನು ಮಧ್ಯ ಪ್ರದೇಶ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಿ, ಕೇಂದ್ರ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.
ಈ ಮಧ್ಯೆ, ಸಿಂಧಿಯಾ ಬಿಜೆಪಿ ಸೇರ್ಪಡೆಗೆ, ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರ ಕೆಲವು ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ನೀಡಿರುವ 19 ಶಾಸಕರ ಪೈಕಿ ಇಬ್ಬರು ಸಚಿವರು ಸೇರಿದಂತೆ ಕನಿಷ್ಠ 12 ಶಾಸಕರು ಸಿಂಧಿಯಾ ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
