ನವದೆಹಲಿ
ಕೆಲ ತಿಂಗಳ ಹಿಂದೆಯಷ್ಟೆ ಕಾಂಗ್ರಸ್ ತೊರೆದು ಬಿಜೆಪಿ ಸೇರಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಾಲಿನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಕೂಡ ಸೇರಿಕೊಂಡಿದ್ದಾರೆ.
ಅವರನ್ನು ಚಿಕಿತ್ಸೆಗಾಗಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರಿಗೆ ಗಂಟಲುನೋವು ನೋವು ಕಾಣಿಸಿಕೊಂಡ ಕಾರಣ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸಿಂಧಿಯಾ ಅವರು ಬಿಜೆಪಿಗೆ ಸೇರಿದ ಬಳಿಕ ಅವರ ಆತ್ಮೀಯರು ಕೂಡ ಅವರನ್ನೇ ಹಿಂಬಾಲಿಸಿದರು. ಬಿಜೆಪಿಯು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಸರ್ಕಾರವನ್ನು ರಚನೆ ಮಾಡಿತ್ತು.ಸೋಮವಾರ ಸಂಜೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದುವರೆಗೆ ಕೊರೊನಾ ವರದಿ ಬಂದಿಲ್ಲ. ಮಾಧವಿ ರಾಜೇ ಅವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಪಾಲ್ಗೊಳ್ಳುವುದಿಲ್ಲ.